ನಮ್ಮನ್ನು ಟಾರ್ಗೆಟ್ ಮಾಡಿದ್ರು.. ಭಾರತದ ವಿರುದ್ಧ ಐಸಿಸಿಗೆ ಪಾಕಿಸ್ತಾನ ದೂರು!
ಬಿಸಿಸಿಐ ವಿರುದ್ಧ ಪಾಕ್ ಕ್ರಿಕೆಟ್ ಮಂಡಳಿ ದೂರು
ಐಸಿಸಿಗೆ ದೂರು ಸಲ್ಲಿಸಿದ ಪಾಕ್ ಕ್ರಿಕೆಟ್ ಮಂಡಳಿ
ನಮ್ಮನ್ನು ಟಾರ್ಗೆಟ್ ಮಾಡಿಲ್ಲ ಎಂದು ಆರೋಪ!
ಸದ್ಯ ಭಾರತದಲ್ಲಿ ನಡೆಯುತ್ತಿರೋ ಏಕದಿನ ವಿಶ್ವಕಪ್ನಲ್ಲಿ ಭಾಗಿಯಾಗಲು ತನ್ನ ದೇಶದ ಮಾಧ್ಯಮ ಪ್ರತಿನಿಧಿಗಳು ಮತ್ತು ಫ್ಯಾನ್ಸ್ಗೆ ವೀಸಾ ನೀಡಲು ವಿಳಂಬ ಮಾಡಲಾಗಿದೆ ಎಂದು ಆರೋಪಿಸಿ ಪಾಕ್ ಕ್ರಿಕೆಟ್ ಮಂಡಳಿ ಬಿಸಿಸಿಐ ವಿರುದ್ಧ ಐಸಿಸಿಗೆ ದೂರು ನೀಡಿದೆ.
ಈ ಸಂಬಂಧ ಟ್ವೀಟ್ ಮಾಡಿರೋ ಪಾಕ್ ಕ್ರಿಕೆಟ್ ಮಂಡಳಿಯೂ, ಏಕದಿನ ವಿಶ್ವಕಪ್ನಲ್ಲಿ ಪಾಲ್ಗೊಳ್ಳಲು ಪಾತ್ ತಂಡದ ಅಭಿಮಾನಿಗಳಿಗೂ ಅವಕಾಶ ಮಾಡಿಕೊಟ್ಟಿಲ್ಲ. ಜತೆಗೆ ಅಕ್ಟೋಬರ್ 14ನೇ ತಾರೀಕು ಅಹಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದ ವೇಳೆ ಪಾಕಿಸ್ತಾನ ತಂಡವನ್ನು ಟಾರ್ಗೆಟ್ ಮಾಡಿ ಅನುಚಿತ ವರ್ತನೆ ತೋರಲಾಗಿದೆ. ಇದರ ವಿರುದ್ಧವೂ ಪ್ರತಿಭಟನೆ ಮಾಡಲಿದ್ದೇವೆ ಎಂದು ಬರೆದುಕೊಂಡಿದೆ.
ಅಸಲಿಗೆ ಆಗಿದ್ದೇನು..?
ಪಂದ್ಯದ ವೇಳೆ ಪಾಕ್ ಸ್ಟಾರ್ ಪ್ಲೇಯರ್ ಮೊಹಮ್ಮದ್ ರಿಜ್ವಾನ್ ಡ್ರೆಸ್ಸಿಂಗ್ ರೂಮ್ಗೆ ಹೋಗುವಾಗ ಕೆಲವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಈ ವಿಡಿಯೋಗಳು ವೈರಲ್ ಕೂಡ ಆಗಿದ್ದವು.
ಹೀಗಾಗಿ ಬಿಸಿಸಿಐ ವಿರುದ್ಧ ಪಾಕ್ ಕ್ರಿಕೆಟ್ ಮಂಡಳಿ ದೂರು ನೀಡಿರಬಹುದು ಎಂದು ಹೇಳಲಾಗುತ್ತಿದೆ.
ಪಂದ್ಯದಲ್ಲಿ ಗೆದ್ದು ಬೀಗಿದ್ದ ಟೀಂ ಇಂಡಿಯಾ
ಅಂದು ನರೇಂದ್ರ ಮೋದಿ ಸ್ಟೇಡಿಯಮ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತಂಡವೂ ರೋಚಕ ಗೆಲುವು ಸಾಧಿಸಿತ್ತು. ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ 86 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.