ಚಿಕ್ಕೋಡಿ: ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕೋಡಿಯ ಭೂದಾಖಲೆಗಳ ಸಹಾಯಕ ನಿರ್ದೇಶಕ.!ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಸರ್ವೇ ಕಾರ್ಯ ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ.
ಎಸ್ಎಂ ಕಲ್ಯಾಣ ಶೆಟ್ಟಿ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕೋಡಿ ಭೂ ದಾಖಲೆ ಇಲಾಖೆ ಅಧಿಕಾರಿ ಎಂದು ತಿಳಿದುಬಂದಿದೆ.
ಸಿದ್ದಪ್ಪ ಹಾಲಪ್ಪ ಪೂಜಾರಿ ಎಂಬುವರಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಲ್ಯಾಣ ಶೆಟ್ಟಿ ಅವರನ್ನು ಬಂಧಿಸಿದ್ದಾರೆ.
ತಮ್ಮ ಜಾಗದ ಸರ್ವೇ ಕಾರ್ಯ ಮಾಡಿಕೊಡುವಂತೆ ರೈತ ಸಿದ್ದಪ್ಪ ಎಂಬುವರು ಅರ್ಜಿ ಸಲ್ಲಿಸಿದ್ದರು. ಆದರೆ ಸರ್ವೆ ಕಾರ್ಯಕ್ಕೆ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಕಲ್ಯಾಣ ಶೆಟ್ಟಿ ಅವರು 6 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಸಿದ್ದಪ್ಪ ಅವರು ಲೋಕಾಯುಕ್ತ ಕಚೇರಿಗೆ ತೆರಳಿ ದೂರು ನೀಡಿದ್ದರು ಎನ್ನಲಾಗಿದೆ.
ಅದರಂತೆ ಸಿದ್ದಪ್ಪ ಹಾಲಪ್ಪ ಪೂಜಾರಿ ಅವರಿಂದ ಲಂಚದ ಹಣವಾಗಿ 6 ಸಾವಿರ ರೂಪಾಯಿ ಪಡೆಯುವಾಗ ಎಂಟ್ರಿ ಕೊಟ್ಟ ಲೋಕಾಯುಕ್ತ ಪೊಲೀಸರು ಹಣದ ಸಹಿತ ಕಲ್ಯಾಣ ಶೆಟ್ಟಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್ಪಿ ಅನಿತಾ ಹದ್ದನ್ನವರ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ಚಿಕ್ಕೋಡಿ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕೋಡಿಯ ಭೂದಾಖಲೆಗಳ ಸಹಾಯಕ ನಿರ್ದೇಶಕ.!
Leave a comment
Leave a comment


