ಕುರುಬ ಸಮುದಾಯ ಮುಖಂಡರಾದ ಲಕ್ಷ್ಮಣರಾವ್ ಚಿಂಗಳೆಯವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಲು ಕಾಂಗ್ರೆಸ್ ಪಕ್ಷದ ನಾಯಕರಿಗೆ ಒತ್ತಾಯ- ಬಾಳು ತೆರದಾಳ
ಮುಗಳಖೋಡ:- ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆಯವರು ಕಾಂಗ್ರೆಸ್ ಪಕ್ಷಕ್ಕೆ ದಶಕಗಳಿಂದಲೂ ಸೇವೆ ಸಲ್ಲಿಸಿದ್ದಾರೆ.
ಸಮಾಜದ ಏಳಿಗೆಗಾಗಿ ದ್ಯೇಯೋದ್ದೆಶಗಾಗಿ ದುಡಿದಿದ್ದಾರೆ.ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಒಳ್ಳೆಯ ಒಡನಾಟ ಹೊಂದಿದ್ದಾರೆ ಇವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಸಂಗೋಳ್ಳಿರಾಯಣ್ಣಾ ಹೋರಾಟ ರಚನಾ ಸಮೀತಿ ಜಿಲ್ಲಾ ಉಪಾಧ್ಯಕ್ಷ ಬಾಳು ತೇರದಾಳ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ 12 ಲಕ್ಷಕ್ಕಿಂತ ಹೆಚ್ಚು ಕುರುಬರ ಸಮುದಾಯದ ಜನರು ಇದ್ದಾರೆ ಮತ್ತು ಕುರುಬರ ಸಮುದಾಯದ ಮುಖಂಡರಾದ ಲಕ್ಷ್ಮಣರಾವ ಚಿಂಗಳೆಯವರು ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದಾರೆ.
ಮತ್ತು ಸಮಾಜದ ಏಳಿಗೆಗಾಗಿ ಶ್ರಮೀಸಿದ್ದಾರೆ, ಇವರನ್ನು ಗುರುತಿಸಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೇರಿ ಕುರುಬರ ಸಮುದಾಯದ ಚಿಕ್ಕೊಡಿ ಮುಖಂಡರಾದ ಲಕ್ಷ್ಮಣರಾವ್ ಚಿಂಗಳೆಯವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಬೇಕೆಂದು ಸಂಗೊಳ್ಳಿ ರಾಯಣ್ಣ ಸ್ಮಾರಕ ಪ್ರಾಧಿಕಾರ ರಚನೆ ಹೋರಾಟ ಸಮಿತಿ ಬೆಳಗಾವಿ ಜಿಲ್ಲೆಯ ಉಪಾಧ್ಯಕ್ಷರಾದ ಬಾಳು ತೇರದಾಳ ರಾಯಬಾಗ ತಾಲೂಕಿನ ಇಟನಾಳ ಗ್ರಾಮದ ತಮ್ಮ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮೂಲಕ ಒತ್ತಾಯ ಮಾಡಿದರು.