ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿ ಇಂದಿನಿಂದಲೇ ಆರಂಭವಾಗುತ್ತಿದೆ.
2019ರ ವಿಶ್ವಕಪ್ನ ಫೈನಲಿಸ್ಟ್ಗಳಾದ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಅಹ್ಮದಾಬಾದ್ನಲ್ಲಿ ಮುಖಾಮುಖಿಯಾಗುವ ಮೂಲಕ ಈ ಮೆಗಾ ಟೂರ್ನಿಗೆ ಚಾಲನೆ ದೊರೆಯಲಿದೆ.
ಹಾಲಿ ಚಾಂಪಿಯನ್ ಆಗಿರುವ ಇಂಗ್ಲೆಂಡ್ ತಂಡ ಈ ಬಾರಿಯ ವಿಶ್ವಕಪ್ನಲ್ಲಿಯೂ ಬಲಿಷ್ಠವಾಗಿದ್ದು ಕಪ್ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ.
ಕುತೂಹಲಕಾರಿಯೆಂದರೆ ಪ್ರಸ್ತುತ ಏಕದಿನ ಕ್ರಿಕೆಟ್ನ ಶ್ರೇಯಾಂಖದಲ್ಲಿ ಇಂಗ್ಲೆಂಡ್ ತಂಡ ಟಾಪ್ 3 ಸ್ಥಾನದಲ್ಲಿ ಇಲ್ಲದಿದ್ದರೂ ಇಂಗ್ಲೆಂಡ್ ವಿಶ್ವಕಪ್ ಗೆಲ್ಲುವ ಫೇವರೀಟ್ ಎನಿಸಿಕೊಂಡಿದ್ದು ಬಲಿಷ್ಠ ಆಟಗಾರರ ಪಡೆಯೊಂದಿಗೆ ಕಣಕ್ಕಿಳಿಯುತ್ತಿದೆ.
ಜೋಸ್ ಬಟ್ಲರ್ ನಾಯಕತ್ವದಲ್ಲಿ ಇಂಗ್ಲೆಂಡ್ ಎಲ್ಲಾ ವಿಭಾಗದಸಲ್ಲಿಯೂ ಸಮತೋಲಿತವಾಗಿದ್ದು ಬಲಿಷ್ಠವಾಗಿರುವುದರಲ್ಲಿ ಅನುಮಾನವಿಲ್ಲ.