ಹೋಲಿ ಕ್ರಾಸ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ. ಮೆಚ್ಚುಗೆ ವ್ಯಕ್ತಪಡಿಸಿದ ಜ್ಯೋತಿ ಫರ್ನಾಂಡಿಸ್
2023 /24 ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಯನ್ನು ಜಿಲ್ಲಾ ಕ್ರೀಡಾಂಗಣ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿರುವ ಹೋಲಿ ಕ್ರಾಸ ಕಾನ್ವೆಂಟ ಶಾಲೆಯ ವಿದ್ಯಾರ್ಥಿಗಳು ಪ್ರೌಢ ಶಾಲೆ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಸ್ಪರ್ಧೆಯಲ್ಲಿ ವೇದಾಂತ ಗುರವ. ಲಾಂಗ ಜಂಪ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಮತ್ತು ಪ್ರಾರ್ಥನಾ ಚುಂಗಾಡಿ 80 ಮೀಟರ ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ, ನಿಷ್ಕವಿ ಪಾಟೀಲ ಹಾಯ ಜಂಪ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ
ಅದರಿಂದ ಹೋಲಿ ಕ್ರಾಸ್ ಕಾನ್ವೆಂಟ ಶಾಲೆಯ ಪ್ರಿನ್ಸಿಪಲ್ ಜ್ಯೋತಿ ಫರ್ನಾಂಡಿಸ ಹಾಗೂ ಎಲ್ಲಾ ಶಿಕ್ಷಕ ವೃಂದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಈ ಸಂದರ್ಭದಲ್ಲಿ ಜಿಲ್ಲಾ P E ಕೋಅಡಿನೇಟರ್ ಮತ್ತು ಶಾಲೆಯ ದೈಹಿಕ ಗುರುಗಳಾದ ಸಿಂತ್ರೆ ಸರ ಮುಂತಾದವರು ಉಪಸ್ಥಿತರಿದ್ದರು
ವರದಿ: ಜ್ಯೋತಿಬಾ ಬೆಂಡಿಗೇರಿ