ಹುಬ್ಬಳ್ಳಿಯ ಕಿರೆಸೂರು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.ಮೃತ ದುರ್ದೈವಿ ನವಲಗುಂದದ ಕುಮಾರಗೊಪ್ಪ ಗ್ರಾಮದ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ (40) ಎಂದು ತಿಳಿದುಬಂದಿದೆ.
ಮಲ್ಲಿಕಾರ್ಜುನ ಅವರು ತಾಲೂಕಿನ ಅಮೀನಗಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನೂ ಇವರು ಚಲಿಸುತ್ತಿದ್ದ ಕಾರು, ಕಿರೇಸೂರ ಗ್ರಾಮದ ಬಳಿ ಆಗಮಿಸಿದ್ದಾಗ ನಿಯಂತ್ರಣ ತಪ್ಪಿ ಸೇತುವೆಯೊಂದಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸ್ಥಳಕ್ಕೆ ನವಲಗುಂದ ಪೋಲಿಸರು ಬೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.ವರದಿ:ಚಂದ್ರು ತಳವಾರ


