ಬೆಳಗಾವಿಗೆ ನೂತನ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿ ಭಿಮಾ ಶಂಕರ ಗುಳೇದ.
ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.ಡಾ.
ಭೀಮಶಂಕರ ಗುಳೇದ ಅವರನ್ನು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದ್ದು ಅವರು ಕರ್ನಾಟಕದ 2012 ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ಬೆಳಗಾವಿ ರಾಜ್ಯದಲ್ಲಿ ಅತ್ಯಂತ ದೊಡ್ಡ ಜಿಲ್ಲೆಯಾಗಿದೆ. ಹೀಗಾಗಿ ಇಡೀ ಜಿಲ್ಲೆಯ ಹೊಣೆಗಾರಿಕೆಯನ್ನು ಅತ್ಯಂತ ಸೂಕ್ಷ್ಮವಾಗಿ ನಿಭಾಯಿಸಬೇಕಾದ ಹೊಣೆಗಾರಿಕೆ ನೂತನ ಎಸ್ಪಿ ಮೇಲಿದೆ.ಈ ಹಿನ್ನಲೆಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಧಿಕಾರಿ ಮೇಲೆ ಜನರ ಗಮನ ಹೆಚ್ಚು ಕೇಂದ್ರೀಕೃತಗೊಂಡಿದೆ.
ಇದುವರೆಗೆ ಬೆಳಗಾವಿಜಿಲ್ಲಾ ಪೋಲಿಸ್ ವರಿಷ್ಠಾಕಾರಿಯಾಗಿದ್ದ ಸಂಜೀವಪಾಟೀಲ ಅವರನ್ನು ರಾಜ್ಯ ಸರ್ಕಾರ ಬೆಂಗಳೂರು ಮಹಾನಗರದ ಉಪ ಪೊಲೀಸ್ ಆಯುಕ್ತರನ್ನಾಗಿ ನೇಮಕಮಾಡಿ ಆದೇ ಹೊರಡಿಸಿದೆ.
ವರದಿ: ಚಂದ್ರು ತಳವಾರ